ಬುಧವಾರ, ಮೇ 18, 2022
25 °C

ಕೋಲಾರ: ಕೆರೆಯಲ್ಲಿ ಮಹಿಳೆಯರ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ನಗರದ ಕೋಲಾರಮ್ಮ ಅಮಾನಿಕೆರೆಯಲ್ಲಿ ಶುಕ್ರವಾರ ವೃದ್ಧೆ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವೃದ್ಧೆಯ ವಯಸ್ಸು ಸುಮಾರು 60 ವರ್ಷ ಹಾಗೂ ಮಹಿಳೆಯ ವಯಸ್ಸು 45 ವರ್ಷ. ಆದರೆ, ಇವರಿಬ್ಬರ ಗುರುತು ಪತ್ತೆಯಾಗಿಲ್ಲ. ಇವರು ಬುಧವಾರ ಕೆರೆಗೆ ಬಿದ್ದಿರುವ ಸಾಧ್ಯತೆಯಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಶವಗಳನ್ನು ಕೆರೆಯಿಂದ ಹೊರ ತೆಗೆದು ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಗಲ್‌ಪೇಟೆ ಪೊಲೀಸರು ಹೇಳಿದ್ದಾರೆ.

ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ. ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆಯೇ ಅಥವಾ ಅವರನ್ನು ಕೊಲೆ ಮಾಡಿ ಶವಗಳನ್ನು ಕೆರೆಯಲ್ಲಿ ಹಾಕಲಾಗಿದೆಯೇ ಎಂಬ ಬಗ್ಗೆ ವಿವಿಧ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ. ಮೃತರ ಗುರುತು ಪತ್ತೆಗಾಗಿ ಕೆರೆಯ ಅಕ್ಕಪಕ್ಕದ ಬಡಾವಣೆಗಳ ಜನರ ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಈವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.