ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಏಳಿಗೆ ಸಹಿಸದೆ ಷಡ್ಯಂತರ: ಕಲಾವಿದ ಯಲ್ಲಪ್ಪ

Published : 3 ಆಗಸ್ಟ್ 2024, 14:11 IST
Last Updated : 3 ಆಗಸ್ಟ್ 2024, 14:11 IST
ಫಾಲೋ ಮಾಡಿ
Comments

ಬಂಗಾರಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೆ ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿರುವುದು ಹಾಸ್ಯಾಸ್ಪದ ಎಂದು ದಲಿತ‌ ಸಂಘರ್ಷ ಸಮಿತಿ‌ ಜಿಲ್ಲಾಧ್ಯಕ್ಷ ಕಲಾವಿದ ಯಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಅಂಬೇಡ್ಕರವರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಾರದರ್ಶಕ ಆಡಳಿತಗಾರ, ಕಳಂಕ ರಹಿತ ವ್ಯಕ್ತಿ ಸಿದ್ದರಾಮಯ್ಯ. ಅವರ‌ ಏಳಿಗೆ ಸಹಿಸದ ಬಿಜೆಪಿ ಅನಗತ್ಯವಾಗಿ ಭ್ರಷ್ಟಾಚಾರದ ಅರೋಪ ಮಾಡುತ್ತಿದೆ ಎಂದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಳೆದ 10 ವರ್ಷಗಳಲ್ಲಿ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿಯೇತರ ಸರ್ಕಾರಗಳನ್ನು ಬೇರೆ ಬೇರೆ ರೀತಿಯಲ್ಲಿ ದುರುದ್ದೇಶ ಪೂರಕವಾಗಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂದರು.

ರಾಜ್ಯಪಾಲರ ಅಧಿಕಾರ ದುರುಪಯೋಗ:

ಸರ್ಕಾರ ಉರುಳಿಸುವ ಕೆಲಸಕ್ಕೆ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇಂತಹ ಷಡ್ಯಂತ್ರ ಕುತಂತ್ರ ಮತ್ತು ಜನ ವಿರೋಧಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT