ಬುಧವಾರ, ಆಗಸ್ಟ್ 10, 2022
20 °C

ಕೋವಿಡ್‌ ಮಹಾಮಾರಿ: ದೇಶ ತಲ್ಲಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ಸ್ವಚ್ಛತಾ ಕಾರ್ಮಿಕರು, ಆಂಬುಲೆನ್ಸ್‌ ಸಿಬ್ಬಂದಿ ಹಾಗೂ ಅಂಗವಿಕಲರಿಗೆ ಇಲ್ಲಿ ಗುರುವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆ ವತಿಯಿಂದ ದಿನಸಿ ಕಿಟ್‌ ವಿತರಿಸಲಾಯಿತು.

‘ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರು ಹಾಗೂ ಜೀವದ ಹಂಗು ತೊರೆದು ಕೆಲಸ ಮಾಡಿದವರಿಗೆ ನೆರವಾಗುವುದು ಹೃದಯವಂತಿಕೆ’ ಎಂದು ವಿಶ್ವ ಹಿಂದೂ ಪರಿಷತ್‌ ರಾಜ್ಯ ಕಾರ್ಯದರ್ಶಿ ಬಸವರಾಜ್ ಅಭಿಪ್ರಾಯಪಟ್ಟರು.

‘ಕೋವಿಡ್‌ ಮಹಾಮಾರಿಯಿಂದ ಇಡೀ ದೇಶ ತಲ್ಲಣಗೊಂಡಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಶಕ್ತಿಮೀರಿ ಕೆಲಸ ಮಾಡುತ್ತಿದೆ. ಸರ್ಕಾರದ ಜತೆ ಹಲವು ಸಂಘಟನೆಗಳು ಕೈಜೋಡಿಸಿವೆ’ ಎಂದು ತಿಳಿಸಿದರು.

‘ಕೋವಿಡ್ ಇಡೀ ಜಗತ್ತನ್ನು ತಲ್ಲಣಗೊಳಿಸಿದೆ. ಇದರಿಂದ ಭಾರತ ದೇಶ ಹೊರತಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿವೆ. ಸರ್ಕಾರದ ಕಾರ್ಯದಲ್ಲಿ ಹಿಂದೂಪರ ಸಂಘಟನೆಗಳು ಕೈಜೋಡಿಸಿ ಸೋಂಕಿತರಿಗೆ ನೆರವಾಗುವ ಸಾಮಾಜಿಕ ಕಾಳಜಿ ತೋರುತ್ತಿವೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತುಮಕೂರು ವಿಭಾಗೀಯ ಸಂಘ ಚಾಲಕ್ ಡಾ.ಶಂಕರ್‌ನಾಯಕ್ ಹೇಳಿದರು.

ವಿಶ್ವ ಹಿಂದೂ ಪರಿಷತ್‌ ಸದಸ್ಯರಾದ ಡಾ.ಶಿವಣ್ಣ, ನಂದೀಶ್, ಬಜರಂಗದಳ ಸದಸ್ಯರಾದ ಬಾಬು, ಬಾಲಾಜಿ, ಪವನ್, ಅನಂತ್, ನಾಣಿ, ವೆಂಕಿ, ಅಭಿಷೇಕ್, ವಿಜಿಕುಮಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು