ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 10 ಸೋಂಕಿತರ ಸಾವು

Last Updated 4 ಜೂನ್ 2021, 15:48 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಮರಣ ಮೃದಂಗ ಮುಂದುವರಿದಿದ್ದು, ಶುಕ್ರವಾರ 10 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 399ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಕೊರೊನಾ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ 6 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 304 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 5,854ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 91 ಮಂದಿಗೆ, ಮಾಲೂರು ತಾಲ್ಲೂಕಿನ 67 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 30 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 46 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 32 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 38 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 713 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 176 ಮಂದಿ, ಮಾಲೂರು ತಾಲ್ಲೂಕಿನ 146, ಬಂಗಾರಪೇಟೆ ತಾಲ್ಲೂಕಿನ 105, ಕೆಜಿಎಫ್‌ ತಾಲ್ಲೂಕಿನ 89, ಮುಳಬಾಗಿಲು ತಾಲ್ಲೂಕಿನ 111 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 86 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT