ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, ಮಾಲೂರು ತಾಲ್ಲೂಕಿನ ಸೋಂಕಿತ ವ್ಯಕ್ತಿಯೊಬ್ಬರು ಕೋವಿಡ್ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 186ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಹೊಸದಾಗಿ 70 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 272ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 19 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 17 ಮಂದಿಗೆ, ಮಾಲೂರು ತಾಲ್ಲೂಕಿನ 12 ಮಂದಿಗೆ, ಕೆಜಿಎಫ್ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 6 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಮೂವರಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 19 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿ, ಮಾಲೂರು, ಕೆಜಿಎಫ್ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.