ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ ಮೂವರು, ಕೆಜಿಎಫ್ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 9 ಮಂದಿ, ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.