ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 39 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4 ಮಂದಿ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ 3, ಮುಳಬಾಗಿಲು ತಾಲ್ಲೂಕಿನ 12, ಶ್ರೀನಿವಾಸಪುರ ತಾಲ್ಲೂಕಿನ 18 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.