ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 3 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಇಬ್ಬರು ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.