ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಮರಣ ಮೃದಂಗ

Last Updated 10 ಜೂನ್ 2021, 17:56 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಮರಣ ಮೃದಂಗ ಮುಂದುವರಿದಿದ್ದು, ಬುಧವಾರ 7 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 434ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಕೊರೊನಾ ಸೋಂಕಿತರ ಪೈಕಿ ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ ಇಬ್ಬರು, ಬಂಗಾರಪೇಟೆ, ಕೆಜಿಎಫ್‌ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 239 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,436ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 74 ಮಂದಿಗೆ, ಮಾಲೂರು ತಾಲ್ಲೂಕಿನ 18 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 67 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 12 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 43 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 25 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 857 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 201 ಮಂದಿ, ಮಾಲೂರು ತಾಲ್ಲೂಕಿನ 178, ಬಂಗಾರಪೇಟೆ ತಾಲ್ಲೂಕಿನ 101, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 137 ಮಂದಿ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 103 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT