ಭಾನುವಾರ, ಜೂನ್ 20, 2021
25 °C

ಕೋವಿಡ್‌: ಮೃತ ಶಿಕ್ಷಕರಿಗೆ ಪರಿಹಾರ ಘೋಷಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಚುನಾವಣೆ ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡು ಕೋವಿಡ್ ಸೋಂಕಿಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿಯ ಕುಟುಂಬಕ್ಕೆ ತಲಾ ₹ 50 ಲಕ್ಷ ಪರಿಹಾರ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮಾರ್ಚ್ ತಿಂಗಳಿಂದಲೇ ಕೋವಿಡ್ 2ನೇ ಅಲೆ ಆರಂಭಗೊಂಡಿದ್ದು, ಏಪ್ರಿಲ್‌ನಲ್ಲಿ ಹೆಚ್ಚು ತೀವ್ರಗೊಂಡಿದೆ. ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆದ ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ, ವಿಧಾನಸಭೆ ಮತ್ತು ಲೋಕಸಭೆಯ ಉಪ ಚುನಾವಣಾ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಸಂಖ್ಯೆಯ ಶಿಕ್ಷಕರನ್ನು ನಿಯೋಜಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣಾ ಆಯೋಗವು ಸಮರ್ಪಕ ರೀತಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿದೆ. ಬಳಿಕ ಸಕಾಲಕ್ಕೆ ಚಿಕಿತ್ಸೆ ಸಿಗದೆ ಹಲವರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಇದರಿಂದ ಹಲವು ಸಿಬ್ಬಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.