ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಆತಂಕ: ರಕ್ತ ಸಂಗ್ರಹಣೆ ಕುಸಿತ

Last Updated 6 ಏಪ್ರಿಲ್ 2021, 15:17 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತ ಸಂಗ್ರಹಣೆ ಹೆಚ್ಚಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಸಲಹೆ ನೀಡಿದರು.

ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಕಾರ್ಯಕಾರಿ ಸಮಿತಿ ಸದಸ್ಯರೊಂದಿಗೆ ಇಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿ, ‘ರಕ್ತದಾನವು ಜೀವದಾನವಾಗಿದೆ. ರಕ್ತದ ಅಗತ್ಯತೆ ಯಾರಿಗಾದರೂ ಬರಬಹುದು. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.

‘ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ. ತ್ಯಾಗ ಎಂಬುದು ಅಕ್ಕಪಕ್ಕದವರು ಮಾಡಲಿ, ಬಲಿದಾನ ಎಂಬುದು ಪ್ರಾಣಿ ಪಕ್ಷಿಗಳಿಗೆ ಸೀಮಿತವಲ್ಲ. ಸ್ವತಃ ತ್ಯಾಗ ಬಲಿದಾನಕ್ಕೆ ಸಿದ್ಧರಾಗಬೇಕು. ಕೊರೊನಾ ಸಮಯದಲ್ಲಿ ರಕ್ತ ನೀಡುವವರ ಅವಶ್ಯಕತೆ ಹೆಚ್ಚಿದೆ. ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಜೀವ ರಕ್ಷಣೆಗೆ ಮುಂದಾಗಬೇಕು’ ಎಂದು ಕಿವಿಮಾತು ಹೇಳಿದರು.

‘ರಕ್ತದಾನದಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಆಗುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು. ಮನುಷ್ಯ ರಕ್ತ ನೀಡುವುದರಿಂದ ಸಣ್ಣಗಾಗುತ್ತಾನೆ ಎಂಬ ತಪ್ಪು ಭಾವನೆ ಬಿಡಬೇಕು. ವರ್ಷಕ್ಕೆ 2 ಬಾರಿ ರಕ್ತದಾನ ಮಾಡಿ ಆರೋಗ್ಯವಂತರಾಗಿರಬೇಕು. ರಕ್ತದಾನದ ಸಂಬಂಧ ಜಾಗೃತಿ ಮೂಡಿಸಬೇಕು. ಎಲ್ಲರೂ ರಕ್ತದಾನ ಮಾಡಲು ಪಣ ತೊಡಬೇಕು’ ಎಂದರು.

ಜಿಲ್ಲಾ ಭಾರತೀಯ ರೆಡ್‌ಕ್ರಾಸ್‌ ಅಧ್ಯಕ್ಷ ಎನ್.ಗೋಪಾಲಕೃಷ್ಣಗೌಡ, ಉಪ ಅಧ್ಯಕ್ಷ ಆರ್.ಶ್ರೀನಿವಾಸನ್, ಖಜಾಂಚಿ ಜಿ.ಶ್ರೀನಿವಾಸ್, ಕಾರ್ಯದರ್ಶಿ ಎಸ್.ನಂದೀಶ್‌ಕುಮಾರ್‌, ಕಾರ್ಯಕಾರಿ ಸಮಿತಿ ಸದಸ್ಯರಾದ ವಿ.ಪಿ.ಸೋಮಶೇಖರ್, ನಾಗೇಂದ್ರಪ್ರಸಾದ್, ಎನ್.ವೆಂಕಟೇಶ್, ಸೀನಪ್ಪ, ಎನ್.ಶ್ರೀರಾಮ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT