ಭಾನುವಾರ, ಜೂನ್ 13, 2021
23 °C

ಕೋವಿಡ್‌: ಸಾವಿನ ಸಂಖ್ಯೆ 271ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, 3 ಮಂದಿ ಸೋಂಕಿತರು ಬುಧವಾರ ಮೃತಪಟ್ಟಿದ್ದಾರೆ.

ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೆಜಿಎಫ್‌ ತಾಲ್ಲೂಕಿನ ಇಬ್ಬರು ಮತ್ತು ಕೋಲಾರ ತಾಲ್ಲೂಕಿನ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 815 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4,746ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 234 ಮಂದಿಗೆ, ಮಾಲೂರು ತಾಲ್ಲೂಕಿನ 140 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 156 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 171 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 80 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 34 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 740 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 267 ಮಂದಿ, ಮಾಲೂರು ತಾಲ್ಲೂಕಿನ 70, ಬಂಗಾರಪೇಟೆ ತಾಲ್ಲೂಕಿನ 176, ಕೆಜಿಎಫ್‌ ತಾಲ್ಲೂಕಿನ 79, ಮುಳಬಾಗಿಲು ತಾಲ್ಲೂಕಿನ 41 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 107 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು