ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಸಾವಿನ ಸಂಖ್ಯೆ 339ಕ್ಕೆ ಏರಿಕೆ

Last Updated 22 ಮೇ 2021, 14:39 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, 6 ಮಂದಿ ಸೋಂಕಿತರು ಶನಿವಾರ ಮೃತಪಟ್ಟಿದ್ದಾರೆ.

ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಮೂವರು, ಕೆಜಿಎಫ್‌, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 339ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 708 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 8,077ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 319 ಮಂದಿಗೆ, ಮಾಲೂರು ತಾಲ್ಲೂಕಿನ 179 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 28 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 65 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 86 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 31 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 664 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 170 ಮಂದಿ, ಮಾಲೂರು ತಾಲ್ಲೂಕಿನ 172, ಬಂಗಾರಪೇಟೆ ತಾಲ್ಲೂಕಿನ 54, ಕೆಜಿಎಫ್‌ ತಾಲ್ಲೂಕಿನ 137, ಮುಳಬಾಗಿಲು ತಾಲ್ಲೂಕಿನ 70 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 61 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT