ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಸಾವಿನ ಸಂಖ್ಯೆ 427ಕ್ಕೆ ಏರಿಕೆ

Last Updated 8 ಜೂನ್ 2021, 16:28 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ 4 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 427ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಮಾಲೂರು, ಬಂಗಾರಪೇಟೆ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 298 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4,061ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 85 ಮಂದಿಗೆ, ಮಾಲೂರು ತಾಲ್ಲೂಕಿನ 62 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 18 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 26 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 44 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 63 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 208 ಮಂದಿ, ಮಾಲೂರು ತಾಲ್ಲೂಕಿನ 167, ಬಂಗಾರಪೇಟೆ ತಾಲ್ಲೂಕಿನ 108, ಕೆಜಿಎಫ್‌ ತಾಲ್ಲೂಕಿನ 133, ಮುಳಬಾಗಿಲು ತಾಲ್ಲೂಕಿನ 176 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 98 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT