ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಾವಿನ ಸಂಖ್ಯೆ 627ಕ್ಕೆ ಏರಿಕೆ

Last Updated 16 ಸೆಪ್ಟೆಂಬರ್ 2021, 12:33 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಗುರುವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 627ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 19 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 83ಕ್ಕೆ ಜಿಗಿದಿದೆ. ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 4 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 5 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.ಕೋಲಾರ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮಾಲೂರು ತಾಲ್ಲೂಕಿನ ಒಬ್ಬರು, ಕೆಜಿಎಫ್‌ ತಾಲ್ಲೂಕಿನ 3, ಮುಳಬಾಗಿಲು ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT