ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕೋವಿಡ್ ಮಾರ್ಗಸೂಚಿ ಪಾಲನೆ: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಮೂರ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣಪ್ಪ ಅವರ ನೇತೃತ್ವದ ತಂಡವು ತಾಲ್ಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಸೋಮವಾರ ಭೇಟಿ ನೀಡಿ ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲನೆ ಮಾಡಿತು.

ತಾಲ್ಲೂಕಿನ ಮದನಹಳ್ಳಿ ಕ್ರಾಸ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ತಂಡವು ಕೋವಿಡ್ ಮಾರ್ಗಸೂಚಿ ಪಾಲನೆ ಆಗುತ್ತಿರುವುದನ್ನು ಖುದ್ದು ದೃಢಪಡಿಸಿಕೊಂಡಿತು.

‘ಕೋವಿಡ್‌ 3ನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ತರಗತಿಯಲ್ಲಿ ಅಂತರ ಕಾಪಾಡುವಂತೆ ಮಕ್ಕಳಿಗೆ ನಿರಂತರವಾಗಿ ಅರಿವು ಮೂಡಿಸಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಬರುವಂತೆ ತಿಳಿ ಹೇಳಿ’ ಎಂದು ಡಿವೈಎಸ್‍ಪಿ ಕೃಷ್ಣಮೂರ್ತಿ ತಿಳಿಸಿದರು.

‘ಕೋವಿಡ್ ಕಾರ್ಮೋಡ ದೂರ ಸರಿಯುತ್ತಿರುವುದರಿಂದ ಶಾಲೆಗಳು ಆರಂಭವಾಗುತ್ತಿವೆ. ಸರ್ಕಾರ ಶೀಘ್ರವೇ 1ರಿಂದ 5ನೇ ತರಗತಿ ಆರಂಭಕ್ಕೂ ಅನುಮತಿ ನೀಡುವ ಸಾಧ್ಯತೆ ಇರುವುದರಿಂದ ಕೋವಿಡ್ ಮಾರ್ಗಸೂಚಿ ಪಾಲನೆಗೆ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು’ ಎಂದು ಬಿಇಒ ರಾಮಕೃಷ್ಣಪ್ಪ ಸೂಚಿಸಿದರು.

‘ಕೈಗಳನ್ನು ಸ್ವಚ್ಛಗೊಳಿಸಲು ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಿ. ಶಾಲೆಗಳ ಶೌಚಾಲಯದಲ್ಲಿ ಸ್ವಚ್ಛತೆ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಕುಡಿಯಲು ಬಿಸಿ ನೀರು ಕೊಡಬೇಕು. ಸಾಧ್ಯವಾದಷ್ಟು ಮನೆಯಿಂದಲೇ ಕುಡಿಯುವ ನೀರು ತರುವಂತೆ ಹೇಳಿ’ ಎಂದು ಸಲಹೆ ನೀಡಿದರು.

ಮುಳ್ಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೊಟ್ಲಿ ಗ್ರಾಮದ ಶಾಂತಿನಿಕೇತನ ಪ್ರೌಢ ಶಾಲೆ, ಸುಗಟೂರಿನ ಸಬರಮತಿ ಪ್ರೌಢ ಶಾಲೆ, ಜಿಲ್ಲಾ ಕೇಂದ್ರದ ಬಾಲಕರ ಮತ್ತು ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿದರು. ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಾದ ವಿಜಯಾನಂದ್, ರಮೇಶ್‌ಗೌಡ, ಕೆಂಪೇಗೌಡ, ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು