ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೊಂಚ ತಗ್ಗಿದ ಕೋವಿಡ್‌ ಆರ್ಭಟ

Last Updated 1 ಮೇ 2021, 14:23 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕಳೆದ ಒಂದು ವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿನ ಆರ್ಭಟ ಶನಿವಾರ ಕೊಂಚ ತಗ್ಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ.

ಕಳೆದ ನಾಲ್ಕೈದು ದಿನದಿಂದ ಪ್ರತಿನಿತ್ಯ ಹೊಸದಾಗಿ ಸರಾಸರಿ 600 ಮಂದಿ ಸೋಂಕಿತರು ಪತ್ತೆಯಾಗುತ್ತಿದ್ದರು. ಬುಧವಾರ (ಏ.28) 1,194 ಮಂದಿ ಸೋಂಕಿತರು ಪತ್ತೆಯಾಗುವ ಮೂಲಕ ಕೋವಿಡ್ ಜಿಲ್ಲೆಯಲ್ಲಿ ದಾಖಲೆ ಬರೆದಿತ್ತು.

ಇದೀಗ ಹೊಸದಾಗಿ 289 ಮಂದಿಗೆ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,811ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 226ಕ್ಕೆ ಜಿಗಿದಿದೆ.

ಹೊಸದಾಗಿ ಕೋಲಾರ ತಾಲ್ಲೂಕಿನ 131 ಮಂದಿಗೆ, ಮಾಲೂರು ತಾಲ್ಲೂಕಿನ 62 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 19 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 47 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 17 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 287 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 129 ಮಂದಿ, ಮಾಲೂರು ತಾಲ್ಲೂಕಿನ 41, ಬಂಗಾರಪೇಟೆ ತಾಲ್ಲೂಕಿನ 25, ಕೆಜಿಎಫ್‌ ತಾಲ್ಲೂಕಿನ 44, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 24 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT