ಗುರುವಾರ , ಸೆಪ್ಟೆಂಬರ್ 23, 2021
27 °C

ಅಕ್ಷರ ದಾಸೋಹ ಸಿಬ್ಬಂದಿಗೆಕೋವಿಡ್ ಪ್ಯಾಕೇಜ್‌: ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುತ್ತಿರುವ ಅಕ್ಷರ ದಾಸೋಹ ನೌಕರರಿಗೆ ಕೋವಿಡ್ ಪ್ಯಾಕೇಜ್ ಘೋಷಿಸದೆ ಸರ್ಕಾರ ಅನ್ಯಾಯ ಮಾಡಿದೆ ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಆರೋಪಿಸಿದೆ.

ಕೋವಿಡ್ ಸಂದರ್ಭದಲ್ಲಿ ಅಕ್ಷರ ದಾಸೋಹ ನೌಕರರು ಪ್ರತಿಫಲವಿಲ್ಲದೆ ಕೆಲಸ ಮಾಡಿದ್ದಾರೆ. ಆದರೆ ಸರ್ಕಾರ ಏಪ್ರಿಲ್‌ನಿಂದ ಆಗಸ್ಟ್ ವರೆಗೂ ವೇತನ ನೀಡಿಲ್ಲ. ಸರ್ಕಾರದ ಅನ್ನಭಾಗ್ಯ, ಕ್ಷೀರ ಭಾಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿರುವ ಅಕ್ಷರ ದಾಸೋಹ ಕಾರ್ಯಕರ್ತರ ಮೇಲೆ ಸರ್ಕಾರ ಕೃಪಾಕಟಾಕ್ಷ ತೋರುತ್ತಿಲ್ಲ. ಕೋವಿಡ್ ಪ್ಯಾಕೇಜ್‌ ಕೂಡ ಘೋಷಣೆ ಮಾಡಿಲ್ಲ ಎಂದು ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 1ರಂದು ಬೆಂಗಳೂರಿನಲ್ಲಿ ಪ್ರಮುಖ ನಾಯಕರು ಸಚಿವರಿಗೆ, ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ನೀಡಲಿದ್ದಾರೆ. ಕೋವಿಡ್ ಅಲೆ ನಿಂತ ನಂತರ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕಲ್ವಮಂಜಲಿ, ರಾಮುಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ಬಿಸಿಯೂಟ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಕೋಡಿಹಳ್ಳಿ ಜ್ಯೋತಿ, ಕೂರಂಡಹಳ್ಳಿ ಅಮರಾವತಿ, ವನಿತ, ಲಕ್ಷ್ಮಮ್ಮ, ಮಂಜುಳ, ರಾಧಮ್ಮ, ಎಮ್ಮೆನತ್ತ ಶೋಭ, ದುರ್ಗಮ್ಮ, ಅಮ್ಮಯ್ಯಮ್ಮ, ಪದ್ಮಮ್ಮ, ಅಮರಾವತಿ, ಗಾಯಿತ್ರಿ, ರತ್ನಮ್ಮ, ಶೈಲಮ್ಮ, ಅನಿತ, ಮುನಿರತ್ನ, ಲಕ್ಷ್ಮಿ, ರೇಷ್ಮಾ, ಆಯಿಷಾ, ಜಯಂತಿ, ಮೀನಾಕ್ಷಿ, ಮಂಜುಳಮ್ಮ, ಶೋಭ, ಕವಿತ, ಸುಜಾತ, ಪ್ರೇಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.