ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಜಾಗೃತಿ ವಹಿಸದಿದ್ದರೆ ಅಪಾಯ

Last Updated 10 ನವೆಂಬರ್ 2020, 16:11 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌–19ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಜನರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ವಹಿಸದಿದ್ದರೆ ಪ್ರಾಣಾಪಾಯ ಕಟ್ಟಿಟ್ಟ ಬುತ್ತಿ’ ಎಂದು ವೈದ್ಯ ಡಾ.ವಿ.ನಾರಾಯಣಸ್ವಾಮಿ ಹೇಳಿದರು.

ಸಮಗ್ರ ಶಿಕ್ಷಣ ಕರ್ನಾಟಕ ಸಮೂಹ ಕೇಂದ್ರವು ಇಲ್ಲಿ ಮಂಗಳವಾರ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಸಮಗ್ರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜನರ ಸಹಕಾರ ಮುಖ್ಯ. ಕೊರೊನಾ ಸೋಂಕು ತಡೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಅಂತರ ಕಾಯ್ದುಕೊಳ್ಳಬೇಕು’ ಎಂದರು.

‘ಸ್ಯಾನಿಟೈಸರ್‌ನಿಂದ ಆಗಾಗ್ಗೆ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಶಿಕ್ಷಕರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಅದೇ ರೀತಿ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕು. ಅನಗತ್ಯವಾಗಿ ಮನೆಯಿಂದ ಹೊರ ಬಂದು ಸುತ್ತಾಡಬಾರದು’ ಎಂದು ಸಲಹೆ ನೀಡಿದರು.

‘ಶಿಕ್ಷಕರು ತರಬೇತಿಯಲ್ಲಿ ಪಡೆದ ಜ್ಞಾನವನ್ನು ತರಗತಿಯಲ್ಲಿ ಅನುಷ್ಠಾನಕ್ಕೆ ತರುವ ಪ್ರಯತ್ನ. ಕೆಲಸದಲ್ಲಿ ಬದ್ಧತೆ ಮತ್ತು ಪ್ರೀತಿ ಇರಬೇಕು’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಶ್ರೀನಿವಾಸ್ ಕಿವಿಮಾತು ಹೇಳಿದರು.

ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರಾಜ್, ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿಯಪ್ಪ, ತಾಲ್ಲೂಕು ಶಿಕ್ಷಕರ ಸಂಘದ ಸದಸ್ಯ ಮುನಿಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್, ಸುಜಾತಾ, ರೇಣುಕಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT