ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೋಲಾರ ಜಿಲ್ಲೆಯಲ್ಲಿ 24 ತಾಸಿನಲ್ಲಿ 8 ಮಂದಿ ಕೊನೆಯುಸಿರು

Last Updated 10 ಮೇ 2021, 15:17 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ರುದ್ರ ತಾಂಡವ ಮುಂದುವರಿದಿದ್ದು, ಕಳೆದ 24 ತಾಸಿನಲ್ಲಿ 8 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಸೋಂಕಿತರ ಸಾವಿನ ನಾಗಲೋಟಕ್ಕೆ ಆರೋಗ್ಯ ಇಲಾಖೆ ಬೆಚ್ಚಿ ಬಿದ್ದಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಸರಣಿ ಸಂಭವಿಸುತ್ತಿದ್ದು, ಭಾನುವಾರವಷ್ಟೇ 6 ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಸೋಮವಾರ 8 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ 263ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 5 ಮಂದಿ ಸೋಂಕಿತರು ಅಸುನೀಗಿದ್ದಾರೆ. ಉಳಿದಂತೆ ಮಾಲೂರು, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ  ಮೇರೆ ಮೀರಿದ್ದು, ಹೊಸದಾಗಿ 755 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನ 389 ಮಂದಿಗೆ, ಮಾಲೂರು ತಾಲ್ಲೂಕಿನ 95 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 121 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 38 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 27 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 85 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 4,904ಕ್ಕೆ ಜಿಗಿದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 765 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 315 ಮಂದಿ, ಮಾಲೂರು ತಾಲ್ಲೂಕಿನ 106, ಬಂಗಾರಪೇಟೆ ತಾಲ್ಲೂಕಿನ 115, ಕೆಜಿಎಫ್‌ ತಾಲ್ಲೂಕಿನ 67, ಮುಳಬಾಗಿಲು ತಾಲ್ಲೂಕಿನ 101 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 61 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT