ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾತ್ಯಕ್ಕೆ ಕೋವಿಡ್‌ ಲಸಿಕೆ ಲಭ್ಯ

Last Updated 7 ಡಿಸೆಂಬರ್ 2020, 15:24 IST
ಅಕ್ಷರ ಗಾತ್ರ

ಕೋಲಾರ: ‘ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಕೋವಿಡ್‌ ಲಸಿಕೆ ಲಭ್ಯವಾಗಲಿದ್ದು, ಜನರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುತ್ತದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

ಇಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಲಸಿಕೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿ, ‘ಮೊದಲ ಹಂತದಲ್ಲಿ ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ’ ಎಂದರು.

‘2ನೇ ಹಂತದಲ್ಲಿ ಪೌರ ಕಾರ್ಮಿಕರಿಗೆ, ಮಧುಮೇಹ ಮತ್ತು ರಕ್ತದೊತ್ತಡದಂತಹ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ. ಅಂತಿಮವಾಗಿ ಸಾರ್ವಜನಿಕರಿಗೆ ಲಸಿಕೆ ಸಿಗಲಿದೆ. ಸೋಂಕಿತರಗಷ್ಟೇ ಲಸಿಕೆ ಕೊಡುವುದಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೂ ಸೋಂಕು ಬರದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ನೀಡಲಾಗುವುದು’ ಎಂದು ವಿವರಿಸಿದರು.

‘2020ರ ಜ.17ರಿಂದ ರಾಷ್ಟ್ರೀಯ ಪೋಲಿಯೊ ಲಸಿಕೆ ಅಭಿಯಾನ ಆರಂಭವಾಗುತ್ತದೆ. ಈ ಬಾರಿ ಒಂದೇ ಹಂತದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗುತ್ತದೆ. ಜ.20ಕ್ಕೆ ಅಭಿಯಾನ ಮುಗಿಯಲಿದೆ. 17ರಂದು ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುವುದು. ನಂತರ ಗ್ರಾಮೀಣ ಪ್ರದೇಶದಲ್ಲಿ 2 ದಿನ ಹಾಗೂ ನಗರ ಪ್ರದೇಶಗಳಲ್ಲಿ 3 ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ’ ಎಂದು ವಿವರಿಸಿದರು.

ತಹಶೀಲ್ದಾರ್‌ ಶೋಭಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌.ನಾಗರಾಜಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT