ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ ಸಂಶೋಧನೆ ಶ್ಲಾಘನೀಯ

Last Updated 24 ಜನವರಿ 2021, 12:19 IST
ಅಕ್ಷರ ಗಾತ್ರ

ಕೋಲಾರ: ‘ಮಾರಕ ಕೋವಿಡ್‌ಗೆ ಭಾರತದಲ್ಲೇ ಲಸಿಕೆ ಸಂಶೋಧಿಸಿರುವುದು ಶ್ಲಾಘನೀಯ. ಇದು ದೇಶದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ’ ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕ ಅಣ್ಣಿಹಳ್ಳಿ ನಾಗರಾಜ್ ಹೇಳಿದರು.

ತಾಲ್ಲೂಕಿನ ಅಣ್ಣಿಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಕೊರೊನಾ ವಾರಿಯರ್ಸ್‌ಗಳಿಗೆ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕೊರೊನಾ ಸೋಂಕಿನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಇಂತಹ ಮಾರಕ ಕಾಯಿಲೆಗಳು ದೇಶದ ವೈದ್ಯರು ಲಸಿಕೆ ಸಂಶೋಧಿಸಿರುವುದು ಐತಿಹಾಸಿಕ ಸಾಧನೆ’ ಎಂದು ಬಣ್ಣಿಸಿದರು.

‘ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ಭಯ ಬೇಡ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ಎಂದು ತಜ್ಞರೇ ತಿಳಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹೆದರುವ ಅಗತ್ಯವಿಲ್ಲ. ಲಸಿಕೆ ಬಂದಿದ್ದರೂ ಜನರು ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಪಾಲಿಸುವುದನ್ನು ನಿರ್ಲಕ್ಷಿಸಬಾರದು’ ಎಂದು ಕಿವಿಮಾತು ಹೇಳಿದರು.

‘ಕೋವಿಡ್ ವಿರುದ್ಧ ಜೀವ ಲೆಕ್ಕಿಸದೆ ಸಮರ ಸಾರಿದ್ದ ಕೊರೊನಾ ವಾರಿಯರ್ಸ್‌ಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ನಂತರದ ದಿನಗಳಲ್ಲಿ ಎಲ್ಲರಿಗೂ ಲಸಿಕೆ ಸಿಗಲಿದೆ’ ಎಂದು ಅಣ್ಣಿಹಳ್ಳಿ ಗ್ರಾ.ಪಂ ಸದಸ್ಯೆ ರೂಪ ತಿಳಿಸಿದರು.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮೇಶ್‌ಕುಮಾರ್, ಆರೋಗ್ಯ ನಿರೀಕ್ಷಕರಾದ ಎನ್.ಸುದರ್ಶನ್, ವಿ.ಶಶಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT