ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: 4 ಕೋವಿಡ್ ಸೋಂಕಿತರ ಸಾವು

Last Updated 27 ಸೆಪ್ಟೆಂಬರ್ 2020, 15:28 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ದಿಢೀರ್ ಏರಿಕೆಯಾಗಿದ್ದು, ಭಾನುವಾರ ಒಂದೇ ದಿನ 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ 4 ಮಂದಿ ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಹೊಸದಾಗಿ 120 ಮಂದಿಗೆ ಸೋಂಕು ಹರಡಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಲಾರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT