ಮುಳಬಾಗಿಲು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಕಾರ್ಪೊರೇಟ್ ವಲಯಗಳಿಗೆ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಫೆ.12 ರಂದು ರಾಜ್ಯದಾದ್ಯಂತ ಭಾರತೀಯ ಕಮುನಿಷ್ಟ್ ಪಕ್ಷದ ವತಿಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಸಿಪಿಐಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಪ್ರಕಾಶ್ ತಿಳಿಸಿದರು.

ನಗರದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ನಡೆದ ಪಕ್ಷದ ಸದಸ್ಯರಿಗೆ ಅಧ್ಯಯನ ಶಿಬಿರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿಯವರ ಸರ್ಕಾರ ಕಾರ್ಮಿಕರಿಗೆ, ರೈತರಿಗೆ ಸೌಲಭ್ಯ ಕಲ್ಪಿಸದೆ ತೆರಿಗೆಗಳ ಭಾರ ಹೆಚ್ಚಿಸುತ್ತಿದೆ. ಕಾರ್ಮಿಕರಿಗೆ ಮೂಲ ಸೌಲಭ್ಯ ನೀಡುವಲ್ಲಿ ವಿಫಲವಾಗಿ, ಕೇವಲ ಕಾರ್ಪೊರೇಟ್ ಸಂಸ್ಥೆಗಳು ಹೇಳಿದಂತೆ ಕುಣಿಯುತ್ತಿದೆ ಎಂದು ಹೇಳಿದರು.

ಜನವಾದಿ ಮಹಿಳಾ ನಾಯಕಿ ಗೀತಾ ಮಾತನಾಡಿ, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಾ ಮಾರಾಟ ಮಾಡಲು ಹೊರಟಿದೆ. ದೇಶದ ಸಂವಿಧಾನವನ್ನು ದುರ್ಬಲಗೊಳಿಸಿ ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡುತ್ತಿದೆ. ಈ ಎಲ್ಲಾ ಕ್ರಮಗಳನ್ನು ಖಂಡಿಸಿ ಫೆ. 12 ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದರು.

ಪುಣ್ಯಹಳ್ಳಿ ಶಂಕರ್, ನವೀನ್, ಗೀತಾ, ರಾಮಚಂದ್ರಪ್ಪ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.