ಸೋಮವಾರ, ಸೆಪ್ಟೆಂಬರ್ 21, 2020
25 °C

ಬಿಜಿಎಂಎಲ್‌ನಲ್ಲಿ ಶ್ರೀಗಂಧದ ಮರಗಳ ಕಳ್ಳತನ; ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕೆಜಿಎಫ್‌: ಬಿಜಿಎಂಎಲ್‌ನ ನ್ಯೂ ಟೇಲರ್ ಶಾಫ್ಟ್‌ನಲ್ಲಿ ಬೆಳೆದಿದ್ದ ಬೃಹತ್‌ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಭದ್ರತಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ರಕ್ಷಣಾ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದೆ.

ಬಿಜಿಎಂಎಲ್ ಪ್ರದೇಶದಲ್ಲಿ ಹಲವಾರು ಶ್ರೀಗಂಧದ ಮರಗಳು ಬೆಳೆದಿವೆ. ಅವುಗಳನ್ನು ವ್ಯವಸ್ಥಿತ ರೀತಿಯಲ್ಲಿ ಕಳ್ಳತನ ಮಾಡಲಾಗುತ್ತಿದೆ.   ಬಿಜಿಎಂಎಲ್‌ ಭದ್ರತಾ ಪ್ರದೇಶವಾಗಿದ್ದು, ಸದಾ ಸಿಬ್ಬಂದಿಯ ಕಾವಲು ಇರುತ್ತದೆ. ಇಂತಹ ಪ್ರದೇಶದಲ್ಲಿಯೇ ಮರಗಳ ಕಳ್ಳತನವಾಗಿದ್ದು  ಭದ್ರತಾ ಸಿಬ್ಬಂದಿಯ ಕೈವಾಡ ಇರುವ ಶಂಕೆ ಇದೆ.

ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ಕೊಡದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯ ಭದ್ರತಾ ಅಧಿಕಾರಿ, ಸೂಪರ್ ವೈಸರ್ ಮತ್ತು ಗುತ್ತಿಗೆ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಬೇಕು. ಕೇಂದ್ರ ಸರ್ಕಾರದ ಆಸ್ತಿಯನ್ನು ಕಾಪಾಡಬೇಕು ಎಂದು ವೇದಿಕೆಯ ಅಧ್ಯಕ್ಷ ಅನ್ಬರಸನ್‌ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.