ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಗಾರು ಬೆಳೆ ಸಮೀಕ್ಷೆ

Last Updated 13 ಡಿಸೆಂಬರ್ 2020, 11:31 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ರೈತರು ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆ ಸಮೀಕ್ಷೆ ಮಾಡಬಹುದು ಎಂದು ತೋಟಗಾರಿಕೆ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.

ರೈತರು ತಮ್ಮ ಜಮೀನುಗಳ ಸರ್ವೆ ನಂಬರ್‌, ಹಿಸ್ಸಾ ನಂಬರ್‌ಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಹಾಗೂ ಇತರೆ ಬೆಳೆಗಳ ವಿವರವನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಆ್ಯಪ್‌ ಮೂಲಕ ನಮೂದಿಸಬಹುದು. ನಿಗದಿತ ಸಮಯದೊಳಗೆ ಬೆಳೆ ಮಾಹಿತಿಯನ್ನು ಅಪ್‌ಲೋಡ್ ಮಾಡದಿದ್ದರೆ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕಂದಾಯ, ಕೃಷಿ, ರೇಷ್ಮೆ ಇಲಾಖೆ ಅಧಿಕಾರಿಗಳು ಅಥವಾ ಸಿಬ್ಬಂದಿ ನೆರವಿನಿಂದ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಬೆಳೆ ವಿಸ್ತೀರ್ಣ ಲೆಕ್ಕ ಹಾಕಲು, ಬೆಳೆ ಹಾನಿ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ, ಬೆಂಬಲ ಬೆಲೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಲ್ಲಿ, ಆರ್‌ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು, ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ವರದಿ ಸಿದ್ಧಪಡಿಸಲು ಬೆಳೆ ಸಮೀಕ್ಷೆ ಮಾಹಿತಿ ಬಳಸಬಹುದಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT