ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೋಟಿ ಮೌಲ್ಯದ ಗಾಂಜಾ ಜಪ್ತಿ

Last Updated 29 ಸೆಪ್ಟೆಂಬರ್ 2020, 16:31 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೆಜಿಎಫ್‌ನ ಮಾರಿಕುಪ್ಪಂ ಪ್ರದೇಶದ ಮನೆಯೊಂದರ ಮೇಲೆ ಮಂಗಳವಾರ ದಾಳಿ ನಡೆಸಿದ ಪೊಲೀಸರು ₹ 1 ಕೋಟಿಗೂ ಹೆಚ್ಚು ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಾರಿಕುಪ್ಪಂನ ಪಂಡಾರ್‌ ಲೈನ್‌ನ ಮನೆಯೊಂದರ ಹಿಂಭಾಗದಲ್ಲಿ ದೊಡ್ಡ ಗುಂಡಿ ತೋಡಿ ಚೀಲಗಳಲ್ಲಿ ಗಾಂಜಾ ಎಲೆಗಳನ್ನು ತುಂಬಿಸಿ ಬಚ್ಚಿಡಲಾಗಿದೆ ಎಂದು ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿ ಆಧರಿಸಿ ಮಾರಿಕುಪ್ಪಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.

‘ಗಾಂಜಾ ಸಿಕ್ಕಿರುವ ಮನೆಯು ರೌಡಿ ತಂಗಂ ಕುಟುಂಬ ಸದಸ್ಯರಿಗೆ ಸೇರಿದೆ. ತಂಗಂನ ತಾಯಿ ಪೌಳಿ ಸೇರಿದಂತೆ ಪ್ರಕರಣದ 7 ಆರೋಪಿಗಳು ಪರಾರಿಯಾಗಿದ್ದು, ಅವರ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಕೆಜಿಎಫ್‌ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಸೆ.8ರಂದು ರೌಡಿ ತಂಗಂನ ಕುಟುಂಬ ಸದಸ್ಯರ ಮತ್ತೊಂದು ಮನೆಯಲ್ಲಿ ಸುಮಾರು ₹ 1.50 ಕೋಟಿ ಮೌಲ್ಯದ ಗಾಂಜಾ ಪತ್ತೆ ಮಾಡಿದ್ದ ಮಾರಿಕುಪ್ಪಂ ಪೊಲೀಸರು ಜೋಸೆಫ್‌ ಎಂಬಾತನನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT