ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರ ನಂಬಿಕೆ ಮುಖ್ಯ: ಬಿಎಸ್ಎನ್ಎಲ್ ಅಧಿಕಾರಿ ಶ್ರೀನಿವಾಸಮೂರ್ತಿ

Last Updated 26 ಫೆಬ್ರುವರಿ 2020, 13:44 IST
ಅಕ್ಷರ ಗಾತ್ರ

ಕೋಲಾರ: ‘ಬ್ಯಾಂಕ್‌ಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಮತ್ತಷ್ಟು ಶಾಖೆ ಆರಂಭಿಸಲು ಸಾಧ್ಯವಾಗುತ್ತದೆ’ ಎಂದು ಬಿಎಸ್‌ಎನ್‌ಎಲ್‌ ಸಹಾಯಕ ಪ್ರಧಾನ ವ್ಯವಸ್ಥಾಪಕ ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟರು.

ನಗರದ ಹೊಸ ಬಡಾವಣೆಯಲ್ಲಿ ಆರಂಭಿಸಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ನೂತನ ವಲಯ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿ, ‘ಗ್ರಾಹಕರ ಹಣಕಾಸು ವ್ಯವಹಾರ ಬ್ಯಾಂಕ್‌ಗಳ ಮೂಲಕ ನಡೆಯುತ್ತದೆ. ಗ್ರಾಹಕರ ನಂಬಿಕೆ ಉಳಿಸಿಕೊಂಡು ಹೋಗುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ಹೇಳಿದರು.

‘ಕೇಂದ್ರ ಸರ್ಕಾರವು ನಗದುರಹಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಿದ್ದರೆ ನಗದುರಹಿತ ವ್ಯವಹಾರ ನಡೆಸಬಹುದು. ಇದರಿಂದ ಸಮಯದ ಉಳಿತಾಯ ಹಾಗೂ ಸುರಕ್ಷಿತ ವ್ಯವಹಾರಕ್ಕೆ ಸಹಕಾರಿಯಾಗುತ್ತದೆ’ ಎಂದು ಸ್ಟೇಟ್‌ ಬ್ಯಾಂಕ್‌ ಇಂಡಿಯಾ (ಎಸ್‌ಬಿಐ) ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ವಸಂತಕುಮಾರ್ ತಿಳಿಸಿದರು.

‘ಜನಸಂಖ್ಯೆ ಆಧಾರದಲ್ಲಿ ಬ್ಯಾಂಕ್‌ನ ಶಾಖೆಗಳನ್ನು ತೆರೆದು ಹೆಚ್ಚಿನ ವಾಣಿಜ್ಯ ವ್ಯವಹಾರ ಮಾಡುವ ಮೂಲಕ ಆ ಭಾಗವನ್ನು ಅಭಿವೃದ್ಧಿಪಡಿಸಬೇಕು. ಬಲಿಷ್ಠ ದೇಶ ನಿರ್ಮಾಣಕ್ಕೆ ಸಹಕಾರ ನೀಡುತ್ತೇವೆ’ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಕೋಲಾರ ವಲಯ ಸಹಾಯಕ ಪ್ರಧಾನ ವ್ಯವಸ್ಥಾಪಕ ವಿ.ನಾಗರಾಜ್ ಭರವಸೆ ನೀಡಿದರು.

ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಎಚ್‌.ಜಿ.ಸುರೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT