ಕೋಲಾರ: ತಾಲ್ಲೂಕಿನ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಗೆಲುವಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್–ಬಿಜೆಪಿ ಮೈತ್ರಿಕೂಟದಿಂದ ಭಾರಿ ಕಸರತ್ತು ನಡೆಯುತ್ತಿದೆ.

ಆಗಸ್ಟ್ 17ರಂದು ನಡೆಯಲಿರುವ ಚುನಾವಣೆಗೆ ಆ.5ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆ ಜೊತೆಗೆ ಭರ್ಜರಿ ಪ್ರಚಾರವೂ ಆರಂಭವಾಗಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ‘ಎ’ ಹಾಗೂ ‘ಬಿ’ ಫಾರಂ ಕೂಡ ರವಾನಿಸಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ಹಾಗೂ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಗುರುವಾರ ‘ಎ’ ಮತ್ತು ‘ಬಿ’ ಫಾರಂಗಳನ್ನು ಪಕ್ಷದ ಅಭ್ಯರ್ಥಿಗಳಿಗೆ ವಿತರಿಸಲು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಅವರಿಗೆ ಹಸ್ತಾಂತರಿಸಿದರು.

‘ಪಕ್ಷದ ನಿಷ್ಠಾವಂತ ಹಾಗೂ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಎಲ್ಲಾ 17 ವಾರ್ಡ್ಗಳಲ್ಲಿಯೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ಲಕ್ಷ್ಮಿನಾರಾಯಣ ಹಾಗೂ ಊರುಬಾಗಿಲು ಶ್ರೀನಿವಾಸ್ ಹೇಳಿದರು.

‘ಶಿಷ್ಟಾಚಾರದ ಪ್ರಕಾರ ಅಭ್ಯರ್ಥಿಗಳಿಗೆ ನೀಡಬೇಕಾದ ಫಾರಂಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದು, ಅವುಗಳನ್ನು ಇದೀಗ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಿಗೆ ಹಸ್ತಂತರಿಸಲಾಗಿದೆ’ ಎಂದರು.

‘ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಇಲ್ಲಿ ಕಣಕ್ಕಿಳಿಯುವ ಪಕ್ಷದ ಅಭ್ಯರ್ಥಿಗಳಿಗೆ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಸಚಿವರ ಬೆಂಬಲವಿದೆ. ಮುಖಂಡರು, ಕಾರ್ಯಕರ್ತರು ಮೈಮರೆತು ಕೂರದೆ ಹಗಲಿರುಳು ಶ್ರಮಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಮುಖಂಡ ಸೋಮಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.