ಶುಕ್ರವಾರ, ಡಿಸೆಂಬರ್ 4, 2020
24 °C

ಸಾಮೂಹಿಕ ಅತ್ಯಾಚಾರ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಬೇತಮಂಗಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಂಗಳ ಗ್ರಾಮದ ಹರೀಶ್‌ (28), ರಘು (23). ಸುಹೇಲ್ (19) ಮತ್ತು ಜಗದೀಶ್ (19) ಬಂಧಿತ ಆರೋಪಿಗಳು.

ಅದೇ ಗ್ರಾಮದ 13 ವರ್ಷದ ಬಾಲಕಿಯು ಬಹಿರ್ದೆಸೆಗಾಗಿ ಭಾನುವಾರ (ನ.15) ರಾತ್ರಿ ಮನೆಯಿಂದ ಹೊರ ಹೋಗಿದ್ದಾಗ ಆರೋಪಿಗಳು ಆಕೆಯನ್ನು ಅಪಹರಿಸಿದ್ದರು. ನಂತರ ಗ್ರಾಮದ ಹೊರವಲಯದ ಹಳೇ ಮನೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ಸೋಮವಾರ ರಾತ್ರಿ ಠಾಣೆಗೆ ದೂರು ನೀಡಿದರು. ಈ ದೂರು ಆಧರಿಸಿ ಅಪಹರಣ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.