ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.ಗುರುಮೂರ್ತಿಗೆ ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ

Published 23 ಫೆಬ್ರುವರಿ 2024, 13:13 IST
Last Updated 23 ಫೆಬ್ರುವರಿ 2024, 13:13 IST
ಅಕ್ಷರ ಗಾತ್ರ

ಮಾಲೂರು:‌ ಪಟ್ಟಣದ ಸಾಹಿತಿ ನ.ಗುರುಮೂರ್ತಿ ಜಯಮಂಗಲ ಅವರ ‘ಉರಿವ ನೆಲದ ನೆರಳು’ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ ದೊರೆತಿದೆ.

ಮಾರ್ಚ್‌ 3ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜೇಂದ್ರ ಪರಿಷತ್ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ  ಡಾ. ಪದ್ಮಿನಿ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಸಾವಿರ ಕೃತಿಗಳು ಬಂದಿದ್ದವು. 25 ಮಂದಿ ಪರಿಣಿತರ ಸಮಿತಿ ಪ್ರಶಸ್ತಿಗೆ ಕೃತಿಗಳನ್ನು ಆಯ್ಕೆ ಮಾಡಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT