ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹಾಗೂ ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದ್ದು, ಕಾಂಗ್ರೆಸ್ನಲ್ಲೇ ಎರಡು ಬಣಗಳ ನಡುವೆ ಬಡಿದಾಟ ನಡೆಯುವ ಸಾಧ್ಯತೆ ಇದೆ.

ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಆಡಳಿತ ಮಂಡಳಿ ವಶಕ್ಕೆ ಪಡೆಯಲು ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿ ನಡುವೆ ಹಣಾಹಣಿ ನಡೆಯಬೇಕಿತ್ತು. ಆದರೆ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಪರಸ್ಪರ ಆರೋಪ, ಪ್ರತ್ಯಾರೋಪದೊಂದಿಗೆ ಬಹಿರಂಗವಾಗಿ ಕಿತ್ತಾಟ ನಡೆಯುತ್ತಿದೆ.

ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹಾಗೂ ವಿಧಾನಸಭೆ ಪರಾಜಿತ ಅಭ್ಯರ್ಥಿ ಆದಿನಾರಾಯಣ (ಮುಳಬಾಗಿಲು) ಒಂದು ಬಣವಾಗಿ ಹೊರಹೊಮ್ಮಿದ್ದಾರೆ.

ಇನ್ನೊಂದೆಡೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಹಾಗೂ ರೂಪಕಲಾ ಶಶಿಧರ್ ಮತ್ತೊಂದು ಬಣವಾಗಿ ಹೊರಹೊಮ್ಮಿದ್ದಾರೆ. ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕೂಡ ಈ ಬಣದ ಕಡೆಯೇ ಇದ್ದಾರೆ.

ಈ ನಡುವೆ, ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಚುನಾವಣೆ ವಿಚಾರವಾಗಿ ಬೆಂಗಳೂರಿನಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ನಿವಾಸದಲ್ಲಿ ಸೋಮವಾರ ನಡೆದ ಸಭೆಗೆ ಎಸ್.ಎನ್.ನಾರಾಯಣಸ್ವಾಮಿ ಹಾಗೂ ರೂಪಕಲಾ ಗೈರಾಗಿರುವುದು ಕುತೂಹಲ ಮೂಡಿಸಿದೆ.

ಎರಡೂ ಸಂಸ್ಥೆಗಳನ್ನು ಕಾಂಗ್ರೆಸ್ ವಶಕ್ಕೆ ಪಡೆಯುವ ತಂತ್ರಗಾರಿಕೆ ಬಗ್ಗೆ ಚರ್ಚಿಸಲು ಜಿಲ್ಲೆಯ ಕಾಂಗ್ರೆಸ್ನ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 2023ರ ವಿಧಾನಸಭೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು. ನಂಜೇಗೌಡ ಹಾಗೂ ಅವರ ತಂಡವಿರುವ ಸಭೆಯಲ್ಲಿ ತಾವು ಭಾಗವಹಿಸುವುದಿಲ್ಲವೆಂದು ಉಸ್ತುವಾರಿ ಸಚಿವರಿಗೆ ನಾರಾಯಣಸ್ವಾಮಿ ಪತ್ರ ಕೂಡ ಬರೆದಿದ್ದರು.

ಈ ಸಭೆಯಲ್ಲಿ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಂಜೇಗೌಡ, ಅನಿಲ್ ಕುಮಾರ್ ಹಾಗೂ ಆದಿನಾರಾಯಣ ಪಾಲ್ಗೊಂಡಿದ್ದರು. ಬೇರೆ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದ ಕಾರಣ ನಸೀರ್ ಅಹ್ಮದ್ ಭಾಗವಹಿಸಿರಲಿಲ್ಲ.

‘ಉಸ್ತುವಾರಿ ಸಚಿವರ ನೇತೃತ್ವದ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಚುನಾವಣೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ನಮ್ಮ ಸಲಹೆಗಳನ್ನು ನೀಡಿದ್ದೇವೆ. ನಮ್ಮ ಉದ್ದೇಶ ಎರಡೂ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳಬೇಕು. ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ತಂತ್ರಗಾರಿಕೆ ರೂಪಿಸುತ್ತಿದ್ದೇವೆ’ ಎಂದು ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ನ ಎಂ.ಎಲ್.ಅನಿಲ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಎರಡು ತಿಂಗಳಿಂದೀಚೆಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲೇ ಹೊಸದಾಗಿ ಎರಡು ಬಣಗಳು ಸೃಷ್ಟಿಯಾಗಿದ್ದು, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಬಣ ಶಮನಕ್ಕೆಂದೇ ಈಚೆಗೆ ಕೆಜಿಎಫ್ ಹಾಗೂ ಬಂಗಾರಪೇಟೆ ಕ್ಷೇತ್ರಕ್ಕೆ ಸಚಿವರು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ನಾರಾಯಣಸ್ವಾಮಿ ಹಾಗೂ ರೂಪಕಲಾ ಜೊತೆ ಚರ್ಚಿಸಿದ್ದರು. ಆದಾಗ್ಯೂ ಬಣ ಜಗಗಳ ಶಮನವಾಗುವಂತೆ ಕಾಣಿಸುತ್ತಿಲ್ಲ.

ಹಾಲು ಒಕ್ಕೂಟಕ್ಕೆ ಒಟ್ಟು 13 ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲಾಗಿದೆ. ಇದಕ್ಕೆ ನಾರಾಯಣಸ್ವಾಮಿ ಅವರ ವಿರೋಧವಿದೆ. ಕೋಲಾರ ತಾಲ್ಲೂಕು ವ್ಯಾಪ್ತಿಯ ಹುತ್ತೂರು ಹೋಬಳಿಯನ್ನು ಬಂಗಾರಪೇಟೆ ಕ್ಷೇತ್ರಕ್ಕೆ ಸೇರಿಸಬೇಕು ಎಂಬುದು ಅವರ ಒತ್ತಾಸೆಯಾಗಿತ್ತು. ಇದೇ ವಿಚಾರದಲ್ಲಿ ಅವರು ಮುನಿಸಿಕೊಂಡಿದ್ದಾರೆ. ಈ ಸಂಬಂಧ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲೂ ಕಿತ್ತಾಟ ನಡೆದಿತ್ತು. ಇತ್ತ ಡಿಸಿಸಿ ಬ್ಯಾಂಕ್ ಬಗ್ಗೆ ಪದೇಪದೇ ಆರೋಪ ಮಾಡುತ್ತಿರುವ ಎಂ.ಅನಿಲ್ ಕುಮಾರ್ ಬಗ್ಗೆ ಶಾಸಕಿ ರೂಪಕಲಾ ಅವರಿಗೆ ಬೇಸರವಿದೆ. ರೈತರ ಸಂಸ್ಥೆಯನ್ನು ನಾಶಪಡಿಸುತ್ತಿದ್ದಾರೆ ಎಂದು ಅವರು ಈಚೆಗೆ ವಾಗ್ದಾಳಿ ನಡೆಸಿದ್ದರು.

ಡಿಸಿಸಿ, ಕೋಮುಲ್ ವಶಕ್ಕೆ ಕಾಂಗ್ರೆಸ್ ತಂತ್ರಗಾರಿಕೆ ಶುರು ಬಣ ಜಗಳ ಕಾಂಗ್ರೆಸ್ಗೆ ಮುಳುವಾಗುವುದೇ? ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ನಿವಾಸದಲ್ಲಿ ಸಭೆ

ನಾವಿದ್ದಲ್ಲಿಗೆ ಎಸ್ಎನ್ ರೂಪಕಲಾ ಬರಲ್ವಂತೆ! ಉಸ್ತುವಾರಿ ಸಚಿವರು ಜಿಲ್ಲೆಯ ಕಾಂಗ್ರೆಸ್ನ ಎಲ್ಲಾ ಶಾಸಕರು ವಿಧಾನಸಭೆ ಪರಾಜಿತ ಅಭ್ಯರ್ಥಿಗಳನ್ನು ಸಭೆಗೆ ಕರೆದಿದ್ದರು. ಆದರೆ ನಾರಾಯಣಸ್ವಾಮಿ ಹಾಗೂ ರೂಪಕಲಾ ಬಂದಿರಲಿಲ್ಲ. ಇಬ್ಬರು ಪ್ರತ್ಯೇಕವಾಗಿ ಸಚಿವರೊಂದಿಗೆ ಮಾತುಕತೆ ನಡೆಸುತ್ತಾರಂತೆ. ನಾವಿದ್ದ ಕಡೆಗೆ ಅವರು ಬರಲ್ವವಂತೆ. ಎಸ್.ಎನ್.ನಾರಾಯಣಸ್ವಾಮಿ ಮೂರು ಬಾರಿ ಶಾಸಕರಾಗಿದ್ದು ನಮಗೆಲ್ಲಾ ಹಿರಿಯರು. ಕೋಮುಲ್ ಹಾಗೂ ಡಿಸಿಸಿ ಬ್ಯಾಂಕ್ನ ಚುನಾವಣೆಯ ಜವಾಬ್ದಾರಿಯನ್ನು ಅವರೇ ವಹಿಸಿಕೊಳ್ಳಲಿ. ನಮಗೆ ಅವರು ಮಾರ್ಗದರ್ಶನ ಮಾಡಬೇಕು. ಆದರೆ ಅವರು ನಮ್ಮ ಜೊತೆ ಸೇರುತ್ತಿಲ್ಲ. ನಾವೇನು ಮಾಡಲು ಸಾಧ್ಯ?ಉಸ್ತುವಾರಿ ಸಚಿವ ನೇತೃತ್ವದಲ್ಲಿ ಎರಡೂ ಸಂಸ್ಥೆಗಳ ಚುನಾವಣೆಯನ್ನು ‘ಕೈ’ವಶ ಮಾಡಿಕೊಳ್ಳಬೇಕು. ನಮಗೆ ಸಹಕಾರ ಕ್ಷೇತ್ರ ಬಗ್ಗೆ ಹೆಚ್ಚಿನ ವಿಚಾರ ತಿಳಿದಿದ್ದು ನಾರಾಯಣಸ್ವಾಮಿ ಹಾಗೂ ರೂಪಕಲಾ ಬೆಂಬಲವೂ ಅಗತ್ಯವಿದೆ. ಎಂ.ಎಲ್.ಅನಿಲ್ ಕುಮಾರ್ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್

ಕಾಂಗ್ರೆಸ್ ಶಾಸಕರ ಆರೋಪ ಪ್ರತ್ಯಾರೋಪ! ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಪಟ್ಟು ಹಿಡಿದಿದ್ದರೆ ಡಿಸಿಸಿ ಬ್ಯಾಂಕ್ನಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಸಚಿವ ಡಾ.ಎಂ.ಸಿ.ಸುಧಾಕರ್ ಸದನದಲ್ಲಿ ಒತ್ತಾಯಿಸಿದ್ದರು. ಈ ಎರಡೂ ಸಂಸ್ಥೆಗಳ ವಿಚಾರದಲ್ಲಿ ಕಾಂಗ್ರೆಸ್ನಲ್ಲೇ ಬಹಿರಂಗವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಜಿಲ್ಲಾಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ. ಕೋಮುಲ್ ತನಿಖೆ ನಡೆಯಲಿ ಹಾಗೆಯೇ ಡಿಸಿಸಿ ಬ್ಯಾಂಕ್ ಹಗರಣಗಳ ತನಿಖೆಯೂ ನಡೆಯಲಿ ಎಂದು ಮತ್ತೊಂದು ಬಣದ ಶಾಸಕರು ತಿರುಗೇಟು ನೀಡಿದ್ದಾರೆ.

ಮೇ 28 ಜೂನ್ 25ಕ್ಕೆ ಚುನಾವಣೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯಲಿದೆ. ಮೇ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕೊಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ (ಕೋಮುಲ್) ಚುನಾವಣೆ ನಿಗದಿಯಾಗಿದ್ದು ಜೂನ್ 25ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು ನಂತರ ಮತ ಎಣಿಕೆ ನಡೆದು ಫಲಿತಾಂಶ ಘೋಷಿಸಲಾಗುತ್ತದೆ. ಒಟ್ಟು 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.