ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತರ ಸಾವಿನ ನಾಗಾಲೋಟ

Last Updated 11 ಮೇ 2021, 15:05 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಮಂಗಳವಾರ 5 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 268ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಮಾಲೂರು ತಾಲ್ಲೂಕಿನ ಇಬ್ಬರು, ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 913 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4,674ಕ್ಕೆ ಜಿಗಿದಿದೆ.

ಸೋಂಕಿತರ ಸಾವು ಹಾಗೂ ಸೋಂಕು ಹರಡುವಿಕೆ ಪ್ರಮಾಣವು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಜಿಲ್ಲೆಯ ಜನರು ಕೋವಿಡ್‌ 2ನೇ ಅಲೆಯ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ.

ಕೋಲಾರ ತಾಲ್ಲೂಕಿನ 129 ಮಂದಿಗೆ, ಮಾಲೂರು ತಾಲ್ಲೂಕಿನ 268 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 66 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 208 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 127 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 115 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 875 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 308 ಮಂದಿ, ಮಾಲೂರು ತಾಲ್ಲೂಕಿನ 236, ಬಂಗಾರಪೇಟೆ ತಾಲ್ಲೂಕಿನ 122, ಕೆಜಿಎಫ್‌ ತಾಲ್ಲೂಕಿನ 108, ಮುಳಬಾಗಿಲು ತಾಲ್ಲೂಕಿನ 92 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 9 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT