ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ 3 ಸೋಂಕಿತರ ಸಾವು

72ಕ್ಕೆ ಏರಿದ ಸಾವಿನ ಸಂಖ್ಯೆ: ಮತ್ತೆ 60 ಮಂದಿಗೆ ಸೋಂಕು
Last Updated 12 ಸೆಪ್ಟೆಂಬರ್ 2020, 16:19 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಇಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 60 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 762ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 42 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 15 ಮಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 19 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 11 ಮಂದಿಗೆ, ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಮತ್ತು ಗರ್ಭಿಣಿಯೊಬ್ಬರಿಗೆ ಸೋಂಕು ಹರಡಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 9 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ತಗುಲಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ಹರಡಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 7 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಮತ್ತು ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 14 ಮಂದಿಗೆ ಸೋಂಕು ಬಂದಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

70 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 70 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 23 ಮಂದಿ, ಮಾಲೂರು ತಾಲ್ಲೂಕಿನ 18, ಬಂಗಾರಪೇಟೆ ತಾಲ್ಲೂಕಿನ 4, ಕೆಜಿಎಫ್‌ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 8 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT