ಶನಿವಾರ, ಫೆಬ್ರವರಿ 22, 2020
19 °C

ನೃತ್ಯ ತಾಲೀಮು ವೇಳೆ ವಿದ್ಯಾರ್ಥಿನಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಟಿ.ಗೊಲ್ಲಹಳ್ಳಿಯ ವಿಮಲಾ ಹೃದಯಾಲಯ ಶಾಲೆ ವಿದ್ಯಾರ್ಥಿನಿ ಪೂಜಿತಾ (15) ಎಂಬುವರು ಶಾಲಾ ವಾರ್ಷಿಕೋತ್ಸವಕ್ಕಾಗಿ ಸಹಪಾಠಿಗಳೊಂದಿಗೆ ಗುರುವಾರ ನೃತ್ಯ ತಾಲೀಮು ನಡೆಸುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಅಲ್ಲಿಕುಂಟೆ ಗ್ರಾಮದ ನಿವಾಸಿ ಚಂದ್ರಶೇಖರ್‌ ಎಂಬುವರ ಮಗಳಾದ ಪೂಜಿತಾ 9ನೇ ತರಗತಿ ಓದುತ್ತಿದ್ದರು. ಚಂದ್ರಶೇಖರ್ ಹೆಡ್‌ ಕಾನ್‌ಸ್ಟೆಬಲ್‌ ಆಗಿದ್ದಾರೆ. ಜ.25ಕ್ಕೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಿಗದಿಯಾಗಿತ್ತು.

ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಶಿಕ್ಷಕರು ಪೂಜಿತಾ ಸೇರಿದಂತೆ ವಿದ್ಯಾರ್ಥಿಗಳಿಗೆ ತರಗತಿ ಕೊಠಡಿಯಲ್ಲಿ ಸಂಜೆ ನೃತ್ಯಾಭ್ಯಾಸ ಮಾಡಿಸುತ್ತಿದ್ದರು. ಈ ವೇಳೆ ಪೂಜಿತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ನಂತರ ಶಿಕ್ಷಕರು ವಿದ್ಯಾರ್ಥಿನಿಯನ್ನು ಸಮೀಪದ ಬೇತಮಂಗಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿನಿಯನ್ನು ಪರೀಕ್ಷಿಸಿದ ವೈದ್ಯರು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ.

ವೈದ್ಯರ ಸಲಹೆಯಂತೆ ಶಿಕ್ಷಕರು ವಿದ್ಯಾರ್ಥಿನಿಯನ್ನು ಆಂಬುಲೆನ್ಸ್‌ನಲ್ಲಿ ಜಾಲಪ್ಪ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಪೂಜಿತಾ ಮಾರ್ಗ ಮಧ್ಯೆಯೇ ಅಸು ನೀಗಿದ್ದಾರೆ. ಪೂಜಿತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪೂಜಿತಾ ನೃತ್ಯಾಭ್ಯಾಸದ ವೇಳೆ ಕುಸಿದು ಬಿದ್ದಿರುವ ದೃಶ್ಯಾವಳಿ ಶಾಲಾ ಕೊಠಡಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು