ಇದರ ಬೆನ್ನಲ್ಲೇ ಹೊಸದಾಗಿ 535 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,936ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 245 ಮಂದಿಗೆ, ಮಾಲೂರು ತಾಲ್ಲೂಕಿನ 112 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 34 ಮಂದಿಗೆ, ಕೆಜಿಎಫ್ ತಾಲ್ಲೂಕಿನ 51 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 39 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 54 ಮಂದಿಗೆ ಸೋಂಕು ಬಂದಿದೆ.