ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವು: ದಾಖಲೆ ಏರಿಕೆ

Last Updated 20 ಅಕ್ಟೋಬರ್ 2020, 13:36 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮಂಗಳವಾರ ದಾಖಲೆಯ ಏರಿಕೆಯಾಗಿದ್ದು, 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಮುಳಬಾಗಿಲು ತಾಲ್ಲೂಕಿನ 3 ಮಂದಿ ಹಾಗೂ ಬಂಗಾರಪೇಟೆ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 141ಕ್ಕೆ ಹೆಚ್ಚಳವಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 40 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,105ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 14 ಮಂದಿಗೆ ಸೋಂಕು ಬಂದಿದೆ. ಕೋಲಾರ ತಾಲ್ಲೂಕಿನ 11, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ 6, ಮುಳಬಾಗಿಲು ತಾಲ್ಲೂಕಿನ 5 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

139 ಮಂದಿ ಗುಣಮುಖ: ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಮನೆಗೆ ಮರಳಿದವರ ಸಂಖ್ಯೆ ಶತಕದ ಗಡಿ ದಾಟಿತು. ಕೋಲಾರ ತಾಲ್ಲೂಕಿನ 44 ಮಂದಿ, ಮಾಲೂರು ತಾಲ್ಲೂಕಿನ 62, ಬಂಗಾರಪೇಟೆ ತಾಲ್ಲೂಕಿನ 8, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 7 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT