ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಇಬ್ಬರು ಸೋಂಕಿತರು ಸಾವು

Last Updated 29 ಅಕ್ಟೋಬರ್ 2020, 15:31 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, ಗುರುವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಕೊರೊನಾ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 31 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 13 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಕೋಲಾರ ತಾಲ್ಲೂಕಿನ 8, ಬಂಗಾರಪೇಟೆ ತಾಲ್ಲೂಕಿನ 6 ಮತ್ತು ಕೆಜಿಎಫ್‌ ತಾಲ್ಲೂಕಿನ 4 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 31 ಮಂದಿ, ಮಾಲೂರು ತಾಲ್ಲೂಕಿನ 25, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್‌ ತಾಲ್ಲೂಕಿನ 14, ಮುಳಬಾಗಿಲು ತಾಲ್ಲೂಕಿನ 12 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT