ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಇಬ್ಬರು ಸೋಂಕಿತರ ಸಾವು

Last Updated 19 ಅಕ್ಟೋಬರ್ 2020, 16:05 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಇಬ್ಬರು ಸೋಂಕಿತರು ಸೋಮವಾರ ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.

ಕಳೆದ 15 ದಿನಗಳಿಗೆ ಹೋಲಿಸಿದರೆ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಸೋಮವಾರ ಕೊಂಚ ಇಳಿಕೆಯಾಗಿದ್ದು, ಆರೋಗ್ಯ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಹೊಸದಾಗಿ 38 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,208ಕ್ಕೆ ಜಿಗಿದಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಲಾರಂಭಿಸಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ಅತಿ ಹೆಚ್ಚು 12 ಮಂದಿಗೆ ಸೋಂಕು ಬಂದಿದೆ.

ಉಳಿದಂತೆ ಕೋಲಾರ ತಾಲ್ಲೂಕಿನ 11, ಮಾಲೂರು ತಾಲ್ಲೂಕಿನ 7, ಬಂಗಾರಪೇಟೆ ತಾಲ್ಲೂಕಿನ 4, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

134 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 134 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 39, ಮಾಲೂರು ತಾಲ್ಲೂಕಿನ 42, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 17 ಮಂದಿ, ಮುಳಬಾಗಿಲು ತಾಲ್ಲೂಕಿನ 11 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 8 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT