ಕೋಲಾರ: ಜಿಲ್ಲೆಯಲ್ಲಿ ಸೋಮವಾರ ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೆಜಿಎಫ್ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ.

ಹೊಸದಾಗಿ 72 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 659ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 34 ಮಂದಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 10, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 7, ಕೆಜಿಎಫ್ ತಾಲ್ಲೂಕಿನ 6 ಹಾಗೂ ಮುಳಬಾಗಿಲು ತಾಲ್ಲೂಕಿನ 8 ಮಂದಿಗೆ ಸೋಂಕು ಹರಡಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 56 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 10 ಮಂದಿ, ಮಾಲೂರು ತಾಲ್ಲೂಕಿನ 22, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್ ತಾಲ್ಲೂಕಿನ 3, ಮುಳಬಾಗಿಲು ತಾಲ್ಲೂಕಿನ 6 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.