ಕೋಲಾರ ತಾಲ್ಲೂಕಿನ 8 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿದೆ. ಇವರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.