ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 185ಕ್ಕೆ ಏರಿಕೆ

Last Updated 7 ಏಪ್ರಿಲ್ 2021, 15:22 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 42 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 231ಕ್ಕೆ ಹೆಚ್ಚಳವಾಗಿದೆ.

ಕೆಜಿಎಫ್‌ ತಾಲ್ಲೂಕಿನ 12 ಮಂದಿಗೆ, ಕೋಲಾರ ತಾಲ್ಲೂಕಿನ 9, ಮಾಲೂರು ತಾಲ್ಲೂಕಿನ 8, ಬಂಗಾರಪೇಟೆ ತಾಲ್ಲೂಕಿನ 6, ಮುಳಬಾಗಿಲು ತಾಲ್ಲೂಕಿನ 5 ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 19 ಮಂದಿ, ಕೆಜಿಎಫ್‌ ತಾಲ್ಲೂಕಿನ 15, ಬಂಗಾರಪೇಟೆ ತಾಲ್ಲೂಕಿನ 14, ಮುಳಬಾಗಿಲು ತಾಲ್ಲೂಕಿನ 5, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 6 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT