ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 564ಕ್ಕೆ ಏರಿಕೆ

Last Updated 29 ಜುಲೈ 2021, 13:47 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಗುರುವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 564ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 25 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 271ಕ್ಕೆ ಇಳಿದಿದೆ.

ಕೋಲಾರ ತಾಲ್ಲೂಕಿನ 7 ಮಂದಿಗೆ, ಬಂಗಾರಪೇಟೆ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು, ಮುಳಬಾಗಿಲು ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT