ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 629ಕ್ಕೆ ಏರಿಕೆ

Last Updated 20 ಸೆಪ್ಟೆಂಬರ್ 2021, 13:18 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಸೋಮವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 629ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 23 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 108ಕ್ಕೆ ಜಿಗಿದಿದೆ. ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ 4 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 10 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT