ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 635ಕ್ಕೆ ಏರಿಕೆ

Last Updated 23 ಅಕ್ಟೋಬರ್ 2021, 13:20 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 635ಕ್ಕೆ ಏರಿಕೆಯಾಗಿದೆ.

ಹೊಸದಾಗಿ 4 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 28ಕ್ಕೆ ಇಳಿಕೆಯಾಗಿದೆ. ಮಾಲೂರು ತಾಲ್ಲೂಕಿನ ಇಬ್ಬರಿಗೆ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಇಬ್ಬರು, ಬಂಗಾರಪೇಟೆ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT