ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 649ಕ್ಕೆ ಏರಿಕೆ

Last Updated 29 ಜನವರಿ 2022, 14:30 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 649ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಹೊಸದಾಗಿ 567 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 6,122ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 130 ಮಂದಿಗೆ, ಮಾಲೂರು ತಾಲ್ಲೂಕಿನ 100 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 60 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 97 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 112 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 68 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 810 ಮಂದಿ ಗುಣಮುಖರಾಗಿದ್ದಾರೆ.

ಕೋಲಾರ ತಾಲ್ಲೂಕಿನ 104 ಮಂದಿ, ಮಾಲೂರು ತಾಲ್ಲೂಕಿನ 70, ಬಂಗಾರಪೇಟೆ ತಾಲ್ಲೂಕಿನ 46, ಕೆಜಿಎಫ್‌ ತಾಲ್ಲೂಕಿನ 196, ಮುಳಬಾಗಿಲು ತಾಲ್ಲೂಕಿನ 153, ಶ್ರೀನಿವಾಸಪುರ ತಾಲ್ಲೂಕಿನ 240 ಮಂದಿ ಮತ್ತು ಹೊರ ಜಿಲ್ಲೆಯ ಒಬ್ಬರು ಗುಣಮುಖರಾಗಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT