ಭಾನುವಾರ, ಏಪ್ರಿಲ್ 18, 2021
25 °C

ಸೋಂಕಿತರ ಸಂಖ್ಯೆ 14ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 3 ಮಂದಿ ಗುಣಮುಖರಾಗಿ ಮಂಗಳವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 14ಕ್ಕೆ ಇಳಿಕೆಯಾಗಿದೆ.

ಕೋಲಾರ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಕೆಜಿಎಫ್‌ ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಈ ಸೋಂಕಿತ ವ್ಯಕ್ತಿಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು