ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 3 ಮಂದಿ ಗುಣಮುಖರಾಗಿ ಗುರುವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆಯಾಗಿದೆ.
ಕೋಲಾರ ತಾಲ್ಲೂಕಿನ ಇಬ್ಬರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 3 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.