ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 78ಕ್ಕೆ ಇಳಿಕೆ

Last Updated 14 ಸೆಪ್ಟೆಂಬರ್ 2021, 13:21 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 9 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 78ಕ್ಕೆ ಇಳಿಕೆಯಾಗಿದೆ.

ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ ಇಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ, ಮುಳಬಾಗಿಲು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 8 ಮಂದಿ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಬಂಗಾರಪೇಟೆ ತಾಲ್ಲೂಕಿನ ಒಬ್ಬರು, ಕೆಜಿಎಫ್‌ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT