ಬೇತಮಂಗಲ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ವೈ. ಸಂಪಂಗಿ ಒತ್ತಾಯಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಮಾಕನಹಳ್ಳಿಯ ನಿವಾಸಿ ಸಹನಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಅವರು, ಬಳಿಕ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಕ್ರಿಕೆಟ್ ಅಭಿಮಾನಿಗಳಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದರಿಂದ 11 ಮಂದಿ ಮೃತಪಟ್ಟಿದ್ದಾರೆ ಎಂದು ದೂರಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣ ಶರ್ಮ, ಬಾಲಕೃಷ್ಣಪ್ಪ, ಬಡಮಾಕನಹಳ್ಳಿ ವೆಂಕಟೇಶ್, ಕೃಷ್ಣಮೂರ್ತಿ, ಪುರುಷೋತ್ತಮ್, ನಾರಾಯಣಸ್ವಾಮಿ, ವೆಂಕಟೇಶ್, ಮುನಿಯಪ್ಪ, ಚಲಪತಿ ಶ್ರೀರಾಮಪ್ಪ, ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.